ಕೃಷ್ಣರಾಜಸಾಗರ ಜಲಾಶಯದ ಕಾವೇರಿಗೆ ಬಾಗಿನ ಸಮರ್ಪಿಸಿದ ಸಿಎಂ ಸಿದ್ದರಾಮಯ್ಯ
ಶ್ರೀರಂಗಪಟ್ಟಣ: ತಾಲೂಕಿನ ಕೆ ಆರ್ ಎಸ್ ಗ್ರಾಮದಲ್ಲಿ ಇಂದು ಸಂಭ್ರಮ ಮನೆ ಮಾಡಿತ್ತು, ರೈತರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಗರಿಷ್ಠ ಮಟ್ಟವಾದ 124.80 ಅಡಿ ತಲುಪಿರುವ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ಬಾಗಿನ ಸಮರ್ಪಣೆ ಮಾಡಿದರು,
ಅರ್ಚಕ ಭಾನುಪ್ರಕಾಶ್ ಶರ್ಮ ವಿಶೇಷ ಪೂಜೆ ನೆರವೇರಿಸಿದ ನಂತರ ಸಂಪುಟ ಸೌದ್ಯೋಗಿಗಳ ಜೊತೆ ಕಾವೇರಿ ಮಾತೆಗೆ ಪೂಜೆ ಸಮರ್ಪಿಸಿ ಮೈದುಂಬಿದ ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧನ್ಯತಾ ಬಾವ ಮೆರೆದರು,
ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್.ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ. ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿ ಧನ್ಯತೆ ಪಡೆದರು,
ಮೈಸೂರಿನಿಂದ ಹೊರಟ ಸಿಎಂ ಸಿದ್ದರಾಮಯ್ಯ ಅವರು ರಸ್ತೆ ಮೂಲಕ ಕೆ ಆರ್ ಎಸ್ ಗೆ ಆಗಮಿಸಿ ಕೃಷ್ಣರಾಜಸಾಗರ ಜಲಾಶಯದ ಬಳಿ ಇರುವ ಕಾವೇರಿ ಪ್ರತಿಮೆಯ ಬಳಿ ಮೊದಲು ಪೂಜೆ ಸಲ್ಲಿಸಿ, ನಂತರ ಅಣೆಕಟ್ಟೆಗೆ ಬಾಗಿನ ಸಮರ್ಪಣೆ ಮಾಡಿದರು,
ಜಲಾಶಯದ ಮೇಲ್ಭಾಗದಲ್ಲಿ ಕನ್ನಡ ಬಾವುಟಗಳ ಹಾರಾಟ ಭಾಷಾಭಿಮಾನದ ಜೊತೆಗೆ ಕನ್ನಡಿಗರ ಮನ ತಣಿಸಿತು, ಎಷ್ಟು ಕಣ್ಣು ಆಯಸಿದರು ಅಷ್ಟುದ್ದಕ್ಕೂ ಕನ್ನಡ ಬಾವುಟ ರಾರಾಜಿಸಿದವು, ತಳಿರು ತೋರಣಗಳ ಸಿಂಗಾರ ಬಾಗಿನಕೇ ಮೆರಗೂ ನೋಡಿದರೆ ಜಲಾಶಯದ ಕೆಳಭಾಗದಲ್ಲಿರುವ ಅಲಂಕೃತ ಕಾವೇರಿ ಮಾತೆ ಕಣ್ಮನ ಸೆಳೆಯಿತು,
ಮಳೆ ಕೊರತೆ ಮತ್ತು ಬರಗಾಲದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಕೆ ಆರ್ ಎಸ್ ಭರ್ತಿ ಆಗಿರಲಿಲ್ಲ ಆದರೆ ಈ ಬಾರಿ ಆಷಾಢ ಮಾಸದಲ್ಲಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆ ಸಂಪೂರ್ಣ ಭರ್ತಿಯಾಗಿದ್ದು ರೈತರಲ್ಲೇ ಸಂತಸ ಮೂಡಿಸುವಂತಹ ಆಗಿದೆ,
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪಿ.ಎಂ. ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ದರ್ಶನ್ ಧ್ರುವನಾರಾಯಣ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕಾವೇರಿ ನೀರಾವರಿ ನಿಗಮದ ಎಂ ಡಿ ಮಹೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು,