ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಎಎಸ್ ಪರೀಕ್ಷೆ ಮುಂದೂಡಿಕೆ

10:55 PM Apr 02, 2024 IST | Samyukta Karnataka

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಮೇ. ೫ ರಂದು ನಡೆಸಲು ಉದ್ದೇಶಿಸಲಾಗಿದ್ದ ೩೮೪ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದ್ದು, ೨೦೨೪ ಜುಲೈ ೭ ರಂದು ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.
೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಬಿ ಮತ್ತು ಗ್ರೂಪ್-ಬಿ ವೃಂದದ ಒಟ್ಟು ೩೮೪ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿತ್ತು. ನೇಮಕಾತಿಗೆ ಅರ್ಜಿ ಸಲ್ಲಿಸಲು ೪-೩-೨೦೨೪ ರಿಂದ ೩-೪-೨೦೨೪ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು ೫-೫-೨೦೨೪ರಂದು ನಡೆಸಲು ನಿಗದಿಪಡಿಸಲಾಗಿತ್ತು. ಪ್ರಸ್ತುತ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹಾಗೂ ಚುನಾವಣಾ ಕಾರ್ಯ ಪ್ರಗತಿಯಲ್ಲಿರುವ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ೧೫-೦೪-೨೦೨೪ರವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದೆ.

Next Article