ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುವದೆ

12:00 PM Jan 29, 2025 IST | Samyukta Karnataka

ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು, ನಿಮ್ಮ ಒಳ್ಳೆಯ ಕೆಲಸಗಳೇ ಪುಣ್ಯಕ್ಕೆ ದಾರಿ

ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ! ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ! ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ.

Dear ಕರ್ನಾಟಕ ಬಿಜೆಪಿ “ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?“ ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ.

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ, ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ. ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದಿದ್ದಾರೆ.

Tags :
#ಕಾಂಗ್ರೆಸ್‌#ಪೂಜೆ#ಪ್ರಿಯಾಂಕ್‌ಖರ್ಗೆ#ಬಿಜೆಪಿ#ಮಹಾಕುಂಭ
Next Article