For the best experience, open
https://m.samyuktakarnataka.in
on your mobile browser.

ಕೆಪಿಎಸ್​ಸಿ ಪರೀಕ್ಷೆ ಮುಂದೂಡಿಕೆ

07:18 PM Sep 13, 2024 IST | Samyukta Karnataka
ಕೆಪಿಎಸ್​ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ವಿವಿಧ ಗ್ರೂಪ್- ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕರ್ನಾಟಕ ಲೋಕ ಸೇವಾ ಆಯೋಗ ಮುಂದೂಡಿದೆ.
ನಾಳೆ ಶನಿವಾರ ಕನ್ನಡ ಭಾಷಾ ಪರೀಕ್ಷೆ ಮತ್ತು ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ “ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ಎಂದು ತಿಳಿಸಲಾಗಿರುತ್ತದೆ. ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ. ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದಿದ್ದಾರೆ.

Tags :