ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಲಸದ ನೆಪದಲ್ಲಿ ಪ್ರಿಯಕರನೊಂದಿಗೆ ಪರಾರಿಗೆ ಯತ್ನ

05:58 PM Aug 31, 2024 IST | Samyukta Karnataka

ಮಂಗಳೂರು: ವಿದೇಶದಲ್ಲಿ ಉದ್ಯೋಗದ ನೆಪಹೇಳಿ ಹೆತ್ತವರು, ಗೆಳತಿಯರನ್ನು ಯಮಾರಿಸಿ ಸುಳ್ಯದ ಯುವತಿಯೊಬ್ಬಳು ಅನ್ಯಧರ್ಮದ ತನ್ನ ಪ್ರಿಯತಮನೊಂದಿಗೆ ಪರಾರಿಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಕೊಲ್ಲಮೊಗ್ರದ ಯುವತಿ ಈ ವರ್ಷವಷ್ಟೇ ದ್ವಿತೀಯ ಪಿಯುಸಿ ತೇರ್ಗಡೆಹೊಂದಿದ್ದಳು ಬಡತನದಲ್ಲಿಯೇ ಇದ್ದ ಕುಟುಂಬಕ್ಕೆ ಮಗಳಿಗೆ ವಿದೇಶದಲ್ಲಿ ಕೆಲಸ ಸಿಕ್ಕ ಸುದ್ದಿಕೇಳಿ ಸಂಭ್ರಮ ಮುಗಿಲು ಮುಟ್ಟಿತ್ತು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ವತಃ ಈಕೆಯನ್ನು ಬಿಟ್ಟು, ಒಳ್ಳೆಯದಾಗಲಿ ಎಂದು ಹರಸಿ ಟಾಟಾ ಹೇಳಿ ಬಂದಿದ್ದಾರೆ.
ಪೋಷಕರು ಮಗಳಿಗೆ ಏನೋ ಒಳ್ಳೆಯದಾಗುತ್ತದೆ ಎಂದುಕೊಂಡು ನೆಮ್ಮಮದಿಯಿಂದ ಮನೆಗೆ ಹೊರಟಿದ್ದಾರೆ. ಮಗಳನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಮನೆಗೆ ಬಂದ ಕುಟುಂಬದವರು, ತಮ್ಮ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಇದರ ಮಾಹಿತಿಗಳನ್ನೂ ಕೂಡ ಹಂಚಿಕೊಂಡಿದ್ದಾರೆ. ಇನ್ನೇನು ಮಗಳು ವಿದೇಶಕ್ಕೆ ಹೊರಟು ಕಷ್ಟಪರಿಹಾರವಾಗಿ ನೆಮ್ಮದಿಯ ಕನಸು ಕಂಡ ಪೋಷಕರಿಗೆ ದಿಗಿಲು ಬಡಿದಂತಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇನ್ನೇನು ವಿಮಾನ ಹೊರಟಿರಬಹುದೆಂದು ಕರೆಮಾಡಿದ್ದಾಗ ಆಕೆಯ ಫೋನ್ ರಿಂಗ್ ಆಗಿದೆ. ಫೋನ್ ರಿಂಗ್ ಆಗಿದ್ದಿರಂದ ಮನೆಯವರಿಗೆ ಅನುಮಾನ ಶುರುವಾಗಿದೆ. ಈಗಾಗಲೇ ವಿಮಾನ ಹೊರಟ ಸಮಯವಾಗಿದೆ. ಹಾಗಿದ್ದರೂ ಆಕೆಯ ಮೊಬೈಲ್ ರಿಂಗ್ ಆಗೋದಕ್ಕೆ ಹೇಗೆ ಸಾಧ್ಯ ಎನ್ನುವ ಅನುಮಾನ ಬಂದಿದೆ. ಆ ಬಳಿಕ ಕೆಲ ದಿನಗಳ ಬಳಿಕ ಆಕೆಯನ್ನು ಧರ್ಮಸ್ಥಳ ಬಸ್ಸಿನಲ್ಲಿ ನೋಡಿರುವುದಾಗಿ ಕೆಲವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಒಳಹೊಕ್ಕು ಹೈ ಡ್ರಾಮಾ ಮಾಡಿದ್ದ ಪುತ್ರಿ ಆ ಬಳಿಕ ಅಲ್ಲಿಂದ ಅನ್ಯಕೋಮಿನ ಯುವಕನ ಜೊತೆಗೆ ಕಾಣೆ ಆಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪೋಷಕರು ಬಂದರೆ, ಅವರನ್ನು ಬೆಂಗಳೂರಿನಲ್ಲೇ ದೂರು ನೀಡಬೇಕೆಂದು ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ಹಿಂದೂ ಸಂಘಟನೆಗಳು ಕೂಡ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿವೆ. ಇದೀಗ ಯುವತಿಯ ಪೋಷಕರು ಮತ್ತೆ ಬೆಂಗಳೂರಿಗೆ ತೆರಳಿ ಮಗಳು ನಾಪತ್ತೆಯಾಗಿರುವ ದೂರು ದಾಖಲು ಮಾಡಿದ್ದಾರೆ.

Next Article