For the best experience, open
https://m.samyuktakarnataka.in
on your mobile browser.

ಕೆ-ಸೆಟ್‌-23: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕ ಪ್ರಕಟ

03:01 PM Jul 09, 2024 IST | Samyukta Karnataka
ಕೆ ಸೆಟ್‌ 23  ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕ ಪ್ರಕಟ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌-23) ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ಪ್ರಕಟಿಸಿದೆ. KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ (https://cetonline.karnataka.gov.in/kea/kset2023) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದೆ.