ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ
03:59 PM Dec 21, 2024 IST | Samyukta Karnataka
ಗುಣಮಟ್ಟದ ಸರಾಸರಿ ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ 11 ಸಾವಿರದ 582 ರೂಪಾಯಿ ಕನಿಷ್ಠ ಬೆಂಬಲ
ನವದೆಹಲಿ: ದೇಶದಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ ಸೇರಿದಂತೆ ರೈತರ ಕಲ್ಯಾಣ ಮತ್ತು ಜೀವನ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸಭೆಯ ಬಳಿಕ ಮಾಹಿತಿ ನೀಡಿದ ಅವರು 2025ರ ಹಂಗಾಮಿನಲ್ಲಿ ಗುಣಮಟ್ಟದ ಸರಾಸರಿ ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ 11 ಸಾವಿರದ 582 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದ್ದು, ಉಂಡೆ ಕೊಬ್ಬರಿ ಕ್ವಿಂಟಾಲ್ ಗೆ 12 ಸಾವಿರದ 100 ರೂಪಾಯಿ ನಿಗದಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಶೇಕಡ 120ಕ್ಕೂ ಹೆಚ್ಚಾಗಿದ್ದು, ಗರಿಷ್ಠ ಏರಿಕೆ ಕಂಡಿದೆ ಎಂದು ತಿಳಿಸಿದರು.