ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಚಿವರ ಎದುರೇ ಆತ್ಮಹತ್ಯೆಗೆ ಯತ್ನ

05:25 PM Dec 01, 2023 IST | Samyukta Karnataka

ಕುಷ್ಟಗಿ: ಜಿಲ್ಲಾ ಉಸ್ತುವಾರಿ ಸಚಿವರ ಎದುರೇ ವ್ಯಕ್ತಿಯೋರ್ವ ವಿಷದ ಬಾಟಲಿ ಕೈಯಲ್ಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ನಡೆದ ಜನತಾ ದರ್ಶನದ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ ಮಾಡುವ ವೇಳೆಯಲ್ಲಿ ವ್ಯಕ್ತಿಯೋರ್ವ ವಿಷದ ಬಾಟಲಿ ಕೈಯಲ್ಲಿ ಹಿಡಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ.
ತಾಲೂಕಿನ ನಿಡಶೇಸಿ ಗ್ರಾಮದ ಸರ್ವೆ ನಂ.೧೦/೫ ರಲ್ಲಿ ೧೦ ಗುಂಟೆ ಜಮೀನಿನಲ್ಲಿ ಮುಕ್ತಾರಖಾನ ಮುದಗಲ್ ನನಗೆ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಮಾಡಿದ್ದು ಸರಕಾರದಿಂದ ಬರಬೇಕಾಗಿದ ಪರಿಹಾರದ ಹಣವನ್ನು ದಿ. ೨೯.೧೧.೨೦೧೦ ರಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಛೇರಿ ಉಪವಿಭಾಗ ಕುಷ್ಟಗಿ ಇವರಿಗೆ ೭ ದಿನಗಳ ಒಳಗಾಗಿ ಪರಿಹಾರ ನೀಡುವಂತೆ ಆದೇಶಿಸಿದ್ದು ಇದುವರಿಗೂ ಯಾವುದೇ ಹಣ ಬಂದಿರುವುದಿಲ್ಲ, ನಾನು ವಿಷ ಕುಡಿದು ಸಾಯುತ್ತೇನೆ ನನಗೆ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಯಾರು ಕೂಡ ಮುಂದಾಗುತ್ತಿಲ್ಲ ಅಳಲು ತೋಡಿಕೊಂಡಿದ್ದಾನೆ.
ಸಚಿವ ಶಿವರಾಜ ತಂಗಡಗಿ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದ ಅವರು, ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗೆ ಸಮಸ್ಯೆ ಕುರಿತು ಗಮನ ಹರಿಸುವಂತೆ ಸೂಚನೆ ನೀಡಿದರು.

Next Article