ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ

04:49 PM Oct 18, 2024 IST | Samyukta Karnataka

ಬೆಂಗಳೂರು : ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಲ್ಲಿ ಇಂದು 53 ರನ್‌ಗಳಿಸಿ 9000 ಸಾವಿರ ರನ್ ಪೂರೈಸಿದ್ದಾರೆ.
ಭಾರತದ ಪರವಾಗಿ ಈ ಅಪರೂಪದ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಈಗಾಗಲೇ ಟೆಸ್ಟ್ ಮಾದರಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (15,921) ಹೆಚ್ಚು ರನ್​ಗಳಿಸಿದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ರಾಹುಲ್ ದ್ರಾವಿಡ್ ಮತ್ತು ಸುನೀಲ್ ಗವಾಸ್ಕರ್ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ.
ಅಲ್ಲದೆ ಮಾಜಿ ನಾಯಕ ಎಂ.ಎಸ್. ಧೋನಿ ಅವರ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿ ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ ಅತ್ಯಂತ ಹೆಚ್ಚು ಪಂದ್ಯಗಳನ್ನು ಆಡಿದ ಭಾರತದ ಎರಡನೇ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್-664
ಪಂದ್ಯಗಳನ್ನು ಆಡಿದ್ದು, ಎಂ. ಎಸ್. ಧೋನಿ-535 ಪಂದ್ಯಗಳನ್ನು ಆಡಿದ್ದಾರೆ, ವಿರಾಟ್ ಕೊಹ್ಲಿ-536ನೇ ಪಂದ್ಯವನ್ನು ಆಡುವ ಮೂಲಕ ಎಂ.ಎಸ್. ಧೋನಿ ಅವರ ದಾಖಲೆ ಮುರಿದಿದ್ದಾರೆ.

Tags :
#9000ರನ್‌#Cricket#ViratKohli𓃵#ಕ್ರಿಕೆಟ್‌#ದಾಖಲೆ#ಬೆಂಗಳೂರು
Next Article