For the best experience, open
https://m.samyuktakarnataka.in
on your mobile browser.

ನಾಲಾಯಕ್‌ಗೆ ಮತ ಹಾಕ್ತೀರಾ?

04:52 PM Apr 21, 2024 IST | Samyukta Karnataka
ನಾಲಾಯಕ್‌ಗೆ ಮತ ಹಾಕ್ತೀರಾ

ಕೋಲಾರ(ಶಿಡ್ಲಘಟ್ಟ): ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್‌ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಕೋಲಾರ(ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.
ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, "ಹೋಗಿ ಪಕೋಡ ಮಾರಾಟ ಮಾಡಿ" ಅಂದ್ರು.
ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.‌
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್‌ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.
ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು? ಈಗ ಎಷ್ಟಾಗಿದೆ?‌ ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ. ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.