For the best experience, open
https://m.samyuktakarnataka.in
on your mobile browser.

ಮಕ್ಕಳಿಂದ ಶೌಚಾಲಯ ಶುಚಿ: ಮತ್ತೊಂದು ಪ್ರಕರಣ

02:03 AM Jan 31, 2024 IST | Samyukta Karnataka
ಮಕ್ಕಳಿಂದ ಶೌಚಾಲಯ ಶುಚಿ  ಮತ್ತೊಂದು ಪ್ರಕರಣ

ಕೋಲಾರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಫ ಮಾಡಿಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ.
ಶಿಢ್ಲಘಟ್ಟ ತಾಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದು ಪರಿಶೀಲಿಸಿದೆ.
ಈ ವೇಳೆ ಮಕ್ಕಳ ಪೋಷಕರು ಪ್ರಭಾರಿ ಶಾಲಾ ಮುಖ್ಯ ಶಿಕ್ಷಕಿ ಬಿ. ರೇಣುಕಮ್ಮ ವಿರುದ್ಧ ತಿರುಗಿಬಿದ್ದಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು ಅವರನ್ನು ಅಮಾನತು ಮಾಡಿದ್ದಾರೆ.
ಕಳೆದ ತಿಂಗಳಷ್ಟೇ ಮಾಲೂರು ತಾಲೂಕಿನ ಯಲವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಮಕ್ಕಳಿಂದ ಮಲದ ಗುಂಡಿ ಸ್ವಚ್ಫ ಮಾಡಿಸುತ್ತಿದ್ದ ಫೋಟೋ, ವಿಡಿಯೋ ವೈರಲ್ ಆಗಿತ್ತು. ಪ್ರಾಂಶುಪಾಲರು, ಮೂವರು ಶಿಕ್ಷಕರು, ವಾರ್ಡನ್ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿದೆ.