ಕೌಟುಂಬಿಕ ಕಲಹ ಅಜ್ಜಿ. ಪತ್ನಿ ಕೊಲೆಗೈದ ಪತಿ
02:20 PM Aug 23, 2024 IST | Samyukta Karnataka
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಜ್ಜಿ ಹಾಗೂ ಪತ್ನಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದವರ, ದ್ಯಾಮಮ್ಮ (66) ಹಾಗೂ ಜ್ಯೋತಿ (23) ಎಂದು ತಿಳಿದು ಬಂದಿದೆ.
ಕೊಲೆಗೈದ ಆರೋಪಿ ದುರಗಪ್ಪ ಎನ್ನಲಾಗಿದೆ.
ಈ ಕುರಿತು ಮುದಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ:-ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾಗಿದ್ದ ದುರಗಪ್ಪ ಕುಟುಂಬದೊಂದಿಗೆ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದು, ಪ್ರತಿ ದಿನ ಮನೆಯಲ್ಲಿ ಜಗಳ ನಡೆಯುತ್ತಿದ್ದು, ಮದ್ಯ ಸೇವಿಸಿ ತಾಯಿ ಹಾಗೂ ಹೆಂಡತಿಗೆ ಮನಸೋ ಇಚ್ಛೆ ಥಳಿಸುತ್ತಿದ್ದ ಇದರಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.
ಕೊಲೆ ಬಳಿಕ ಆರೋಪಿ ದುರಗಪ್ಪ ಸ್ಥಳದಿಂದ ಪರಾರಿಯಾಗಿದ್ದು ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.