ಕ್ಯಾನ್ಸರ್‌ಗಾಗಿ ಭಾರತದ ಮೊದಲ ಕೈಗೆಟುಕುವ ಚಿಕಿತ್ಸಾ ಪದ್ದತಿ
04:54 PM Apr 04, 2024 IST | Samyukta Karnataka
ಮುಂಬೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಟಿ ಬಾಂಬೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ CAR-T ಸೆಲ್ ಥೆರಪಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.
ಅವರು ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಭಾರತದ ಮೊದಲ ಸ್ವದೇಶಿ ವಂಶವಾಹಿ ಚಿಕಿತ್ಸಾ ಪದ್ದತಿಗೆ ಚಾಲನೆ ನೀಡಿ ಮಾತನಾಡಿದ ಅವರು ಐಐಟಿ ಬಾಂಬೆ ಮತ್ತು ಟಾಟಾ ಸ್ಮಾರಕ ಕೇಂದ್ರ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಈ ನೂತನ ಸಾಧನವು ಧಾತು ಆಧಾರಿತ ಚಿಕಿತ್ಸೆಯಾಗಿದೆ. ಇದು ಹಲವು ಬಗೆಯ ಕ್ಯಾನ್ಸರ್ ಕಾರಕ ರೋಗವನ್ನು ಗುಣಪಡಿಸುವಲ್ಲಿ ಪರಿಣಾಮಕಾರಿಯಾಗಿದೆ. ಈ ಚಿಕಿತ್ಸೆಯು ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲೇ ಅತ್ಯಂತ ಆಧುನಿಕ ಮತ್ತು ಪರಿಣಾಮಕಾರಿಯಾಗಿದ್ದು ರೋಗಿಗಳಿಗೆ ತಗಲುವ ವೆಚ್ಚವು ಗಣನೀಯವಾಗಿ ಕಡಿಮೆಯಾಗಲಿದೆ’ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.