ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ

07:28 AM Dec 05, 2023 IST | Samyukta Karnataka

ಬೆಂಗಳೂರು: ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ "ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

Next Article