ಕ್ಷೇತ್ರದ ಜನತೆಗೆ ಧನ್ಯವಾದ ಹೇಳಿದ ಮಾಜಿ ಸಿಎಂ
04:56 PM Mar 13, 2024 IST
|
Samyukta Karnataka
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಡಿ.ವಿ. ಸದಾನಂದಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ನನಗೆ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದ್ದೀರಿ. 7 ವರ್ಷಗಳ ಕಾಲ ಪ್ರಧಾನಿ ಮೋದಿ ಅವರೊಂದಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶ ಕಲ್ಪಿಸಿದ್ದೀರಿ. ಎಲ್ಲರಿಗೂ ನನ್ನ ಅಂತರಾಳದ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
Next Article