ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಖಾತೆಯನ್ನು ಬೇರೆ ಯಾರಾದರೂ ಸಮರ್ಥ ಸಚಿವರಿಗೆ ಒಪ್ಪಿಸಿ

10:55 AM Aug 13, 2024 IST | Samyukta Karnataka

ಗದಗ ಮತ್ತು ವಿಜಯನಗರ ಜಿಲ್ಲೆಗಳ ನೀರಾವರಿಗಾಗಿ ಅನುಷ್ಠಾನಗೊಂಡ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹಮ್ಮಗಿ ಬ್ಯಾರೇಜ್‌ನ ಗೇಟ್‌ಗಳ ದುರಸ್ತಿಗೆ ಬಂದಿವೆ ಒಂದು ವರ್ಷದ ಹಿಂದೆಯೇ ಮುನ್ಸೂಚನೆ ನೀಡಿದ್ದರೂ ಸರ್ಕಾರ ಇದುವರೆಗೂ ಗೇಟ್‌ಗಳ ದುರಸ್ತಿ ಕಾರ್ಯ ಆರಂಭಿಸಿಲ್ಲ

ಬೆಂಗಳೂರು: ಒಂದು ವರ್ಷದ ಹಿಂದೆಯೇ ಮುನ್ಸೂಚನೆ ನೀಡಿದ್ದರೂ ಸರ್ಕಾರ ಇದುವರೆಗೂ ಗೇಟ್ ಗಳ ದುರಸ್ತಿ ಕಾರ್ಯ ಆರಂಭಿಸಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಾಡಿನ ರೈತರ ಜೀವನಾಡಿ ಆಗಿರುವ ಜಲಾಶಯಗಳ ನಿರ್ವಹಣೆ ಬಗ್ಗೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಅಸಡ್ಡೆ, ನಿರ್ಲಕ್ಷ್ಯದಿಂದ ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತ ಸಂಭವಿಸಿರುವ ಬೆನ್ನಲ್ಲೇ, ಈಗ ಮತ್ತೊಂದು ಮತ್ತೊಂದು ಅಣೆಕಟ್ಟು ಅಪಾಯದ ಅಂಚಿನಲ್ಲಿರುವುದು ಬೆಳಕಿಗೆ ಬಂದಿದೆ. ಗದಗ ಮತ್ತು ವಿಜಯನಗರ ಜಿಲ್ಲೆಗಳ ನೀರಾವರಿಗಾಗಿ ಅನುಷ್ಠಾನಗೊಂಡ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಹಮ್ಮಗಿ ಬ್ಯಾರೇಜ್‌ನ ಗೇಟ್‌ಗಳ ದುರಸ್ತಿಗೆ ಬಂದಿವೆ ಒಂದು ವರ್ಷದ ಹಿಂದೆಯೇ ಮುನ್ಸೂಚನೆ ನೀಡಿದ್ದರೂ ಸರ್ಕಾರ ಇದುವರೆಗೂ ಗೇಟ್‌ಗಳ ದುರಸ್ತಿ ಕಾರ್ಯ ಆರಂಭಿಸಿಲ್ಲ. ಸಿಎಂ ಸಿದ್ದರಾಮಯ್ಯನವರೇ, ಹಮ್ಮಗಿ ಬ್ಯಾರೇಜ್ ನ 5-6 ಗೇಟುಗಳು ಶಿಥಿಲಗೊಂಡಿರುವ ವರದಿ ಇದೆ. ತಮ್ಮ part-time ನೀರಾವರಿ ಸಚಿವರಾದ ಡಿ. ಕೆ. ಶಿವಕುಮಾರ ಅವರಿಗೆ ಇಲಾಖೆ ನಿರ್ವಹಿಸಲು ಪುರುಸೊತ್ತಿಲ್ಲದಿದ್ದರೆ, ನೀರಾವರಿ ಖಾತೆಯನ್ನು ಬೇರೆ ಯಾರಾದರೂ ಸಮರ್ಥ ಸಚಿವರಿಗೆ ಒಪ್ಪಿಸಿ. ಅದು ಬಿಟ್ಟು ಒಬ್ಬ part-time ಮಂತ್ರಿ, full-time ಕೆಪಿಸಿಸಿ ಅಧ್ಯಕ್ಷರಿಗೆ ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಅಂತಹ ಪ್ರಮುಖ ಖಾತೆ ನೀಡಿ ಜನರ ಬದುಕಿನ ಜೊತೆ ಚೆಲ್ಲಾಟವಾಡಬೇಡಿ. ನಿಮ್ಮ ರಾಜಕೀಯ ತೆವಲಿಗೆ ಜಲಾಶಯಗಳನ್ನ ನಿರ್ಲಕ್ಷಿಸಿ ಅನ್ನದಾತರು, ಜನ ಸಾಮಾನ್ಯರ ಬದುಕನ್ನ ಅಪಾಯಕ್ಕೆ ತಳ್ಳಬೇಡಿ ಎಂದಿದ್ದಾರೆ.

Next Article