ಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ತೀರ್ಮಾನ
ಹುದ್ದೆಗಳ ನೇಮಕಾತಿಗೆ ಚುರುಕು ನೀಡುವ ಮೂಲಕ ಆಡಳಿತ ಯಂತ್ರವನ್ನು ಸದೃಢಗೊಳಿಸಲಾಗುವುದು
ಬೆಂಗಳೂರು: ಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ ಎಂದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು ನಮ್ಮ ವಾಗ್ದಾನವಾಗಿತ್ತು. ಅಂತೆಯೇ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಹುದ್ದೆಗಳನ್ನು ಭರ್ತಿ ಮಾಡಲು ಕಾಲಮಿತಿ ನಿಗದಿಪಡಿಸಿ ನೇಮಕಾತಿ ನಡೆಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ. 371(ಜೆ) ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತಾದ ನನ್ನ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ಹುದ್ದೆಗಳ ನೇಮಕಾತಿಗೆ ಚುರುಕು ನೀಡುವ ಮೂಲಕ ಆಡಳಿತ ಯಂತ್ರವನ್ನು ಸದೃಢಗೊಳಿಸುವುದಲ್ಲದೆ ಪ್ರತಿಭಾವಂತ ಯುವ ಸಮುದಾಯದ ಉದ್ಯೋಗದ ಕನಸನ್ನು ಈಡೇರಿಸುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.