For the best experience, open
https://m.samyuktakarnataka.in
on your mobile browser.

ಖ್ಯಾತ ಕೃಷಿ ವಿಜ್ಞಾನಿ ಡಾ. ಎಸ್. ಎ. ಪಾಟೀಲ್ ನಿಧನ

01:54 PM Jul 15, 2024 IST | Samyukta Karnataka
ಖ್ಯಾತ ಕೃಷಿ ವಿಜ್ಞಾನಿ ಡಾ  ಎಸ್  ಎ  ಪಾಟೀಲ್ ನಿಧನ

ಕಲಬುರಗಿ : ಖ್ಯಾತ ಕೃಷಿ ವಿಜ್ಞಾನಿ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಎಸ್. ಎ. ಪಾಟೀಲ್ ನಿಧನರಾಗಿದ್ದಾರೆ.
ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ, ಅವರಿಗೆ 80 ವರ್ಷ ವಯಸ್ಸಾಗಿತ್ತು, ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಎರಡು ಅವಧಿಗೆ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಕೃಷಿ ಆಯೋಗದ ಅಧ್ಯಕ್ಷರಾಗಿದ್ದರು. ಐಎಆರ್ ಐ ನಿರ್ದೇಶಕರು ಹೀಗೆ ಹಲವು ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸಹೋದರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.