ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಹೆಸರು

09:39 PM Nov 24, 2024 IST | Samyukta Karnataka

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣವೆಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಭಾನುವಾರ ಪ್ರಕಟಣೆ ನೀಡಿರುವ ಸಚಿವರು, ಈ ಶಿಫಾರಸನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದವರು ಹೇಳಿದ್ದಾರೆ.

Next Article