ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗದಗ ಹೊಂಬಳ:ರೈಲ್ವೆ ಮೇಲ್ಸೆತುವೆ ಕಾಮಗಾರಿ ಪರಿಶೀಲಿಸಿದ ಬೊಮ್ಮಾಯಿ

03:34 PM Dec 27, 2024 IST | Samyukta Karnataka

ಐದಾರು ತಿಂಗಳಲ್ಲಿ ‌ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳಿಂದ ಭರವಸೆ

ಗದಗ: ಗದಗ ನಗರದ ಗಂಗಾಪುರ ಪೇಟೆಯಲ್ಲಿರುವ ಗದಗ ಹಾಗೂ ಹೊಂಬಳ ಸಂಪರ್ಕ ಕಲ್ಪಿಸುವ ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಐದಾರು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಗದಗ ನಗರದ ಗಂಗಾಪುರ ಪೇಟೆಯಲ್ಲಿರುವ ಗದಗ ಹಾಗೂ ಹೊಂಬಳ ಸಂಪರ್ಕ ಕಲ್ಪಿಸುವ ನಿರ್ಮಾಣ ಹಂತದಲ್ಲಿರುವ ರೇಲ್ವೆ ಸೇತುವೆ ಕಾಮಗಾರಿಯ ಪರಿಶೀಲನೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಂಬಳ ಗ್ರಾಮೀಣ ಪ್ರದೇಶದಿಂದ ಅಂಬೇಡ್ಕರ್ ನಗರದ ಮೂಲಕ ಹಾಯ್ದು ಹೋಗುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ಮಾಡಿದೆ. ಇದು ಬಹಳ ವರ್ಷದ ಕಾಮಗಾರಿ ಸ್ಥಗಿತಗೊಂಡಿತ್ತು. ಮೂರು ತಿಂಗಳ ಹಿಂದೆ ಈ ಕಾಮಗಾರಿಯ ಕುರಿತು ಹುಬ್ಬಳಿಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳ ಜೊತೆ ಸಭೆ ಮಾಡಿದಾಗ ಕೂಡಲೆ ಕಾಮಗಾರಿ ಪ್ರಾರಂಭ ಮಾಡುವುದಾಗಿ ಹೇಳಿದ್ದರು. ಅದೇ ರೀತಿ ಕ್ರಮ ಕೈಗೊಂಡಿದ್ದಾರೆ. ಹೊಸ ಗುತ್ತಿಗೆದಾರರನ್ನು ನೇಮಿಸಿದ್ದು ಕಾಮಗಾರಿ ಪ್ರಾರಂಭವಾಗಿದೆ. ಇಲ್ಲಿ ಎರಡು ಮೂರು ಕಾಮಗಾರಿಗಳ ಕುರಿತು ಚರ್ಚೆ ಮಾಡಿದ್ದೇವೆ. ಅಂಬೇಡ್ಕರ್ ನಗರದಲ್ಲಿನ 80 ಮೀಟರ್ ಕುಡಿಯುವ ನೀರಿನ ಪೈಪ್ ಲೈನ್ ಬದಲಾವಣೆ ಮಾಡಬೇಕಿತ್ತು. ಅಂಬೇಡ್ಕರ್ ನಗರದ ನಿವಾಸಿಗಳು ಒಳ ಚರಂಡಿ ವ್ಯವಸ್ಥೆ ಸುಧಾರಣೆ ಸೇರಿದಂತೆ ಕೆಲವು ಬೇಡಿಕೆ ಇಟ್ಟಿದ್ದಾರೆ. ಅಂಬೇಡ್ಕರ್ ನಗರ ಬಡವರು ಇರುವಂತಹ ಪ್ರದೇಶ ಈ ಕುರಿತು ಈ ಪ್ರದೇಶದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಹಾಯಕ ಆಯುಕ್ತ ಗಂಗಪ್ಪ ಅವರಿಗೆ ಮಾತನಾಡಿದ್ದೇನೆ. ಅವರು ಕೂಡಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗನೆ ಹೊಂಬಳ ಮತ್ತು ಅಂಬೇಡ್ಕರ್ ನಗರದ ಕಡೆಗಿನ ಎರಡೂ ಕಾಮಗಾರಿ ಏಕಕಾಲಕ್ಕೆ ಆರಂಭವಾಗಲಿವೆ‌ ಎಂದರು.
ಇದರ ಮಧ್ಯ ರೈಲ್ವೆ ಹಳಿ ಮೇಲೆ 42 ಮೀಟರ್ ನ ಸ್ಟೀಲ್ ಬ್ರಿಡ್ಜ್ ಬರಲಿದೆ. ಇನ್ನೊಂದು ಹದಿನೈದು ದಿನಗಳಲ್ಲಿ ಅದನ್ನು ಜೋಡಿಸಲಾಗುತ್ತದೆ. ಐದಾರು ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಆಸಕ್ತಿ ತೆಗೆದುಕೊಂಡಿದ್ದಾರೆ. ನಾನೂ ಮೇಲಿಂದ ಮೇಲೆ ಯೋಜನೆಯ ಪ್ರಗತಿ ಪರಿಶೀಲನೆ ಮಾಡುತ್ತೇನೆ. ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ರೇಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Tags :
#ಗದಗ#ಬಸವರಾಜ ಬೊಮ್ಮಾಯಿ
Next Article