For the best experience, open
https://m.samyuktakarnataka.in
on your mobile browser.

ಗಲೀಜು ಧ್ವಜ ಹಾರಿಸಿದ್ದಕ್ಕೆ ತರಾಟೆ

05:22 PM Jan 26, 2024 IST | Samyukta Karnataka
ಗಲೀಜು ಧ್ವಜ ಹಾರಿಸಿದ್ದಕ್ಕೆ ತರಾಟೆ

ಕುಷ್ಟಗಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಕುಷ್ಟಗಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಗಲೀಜಾಗಿದ್ದ ಧ್ವಜವನ್ನು ಹಾರಿಸಿದ್ದಕ್ಕೆ ಸಾರ್ವಜನಿಕರು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಧ್ವಜಾರೋಹಣ ನೆರವೇರಿಸುವ ವೇಳೆಯಲ್ಲಿ ಕಡ್ಡಾಯವಾಗಿ ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡಬೇಕೆಂದು ಸರಕಾರ ಆದೇಶವಿದೆ. ಆದರೆ ಇಲ್ಲಿನ ಸಾರಿಗೆ ಇಲಾಖೆ ಸಿಬ್ಬಂದಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ಇಡದೆ ಅಪಮಾನ ಮಾಡಿದ್ದಾರೆ. ಧೂಳಿನಿಂದ ಕೂಡಿದ ಗಾಂಧೀಜಿ ಫೋಟೋವನ್ನು ಇಟ್ಟು ಪೂಜೆ ಮಾಡಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಕೆಲ ನಿಮಿಷಗಳ ಕಾಲ ಪ್ರತಿಭಟನೆ ನಡೆಸಿದರು.
ಸಿಬ್ಬಂದಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡುವುದನ್ನು ನಿರ್ಲಕ್ಷಿಸಿದ್ದಾರೆ. ಕಡೆಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡುವ ಮೂಲಕ ಗೌರವಿಸಲಾಗಿದೆ. ಇನ್ನು ಮುಂದೆ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಸಾರಿಗೆ ಘಟಕದ ವ್ಯವಸ್ಥಾಪಕ ಸುಂದರಗೌಡ ಪಾಟೀಲ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದರು.