ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

"ಗಾಂಧೀ ಭಾರತ ನಿರ್ಮಾಣದ ಕನಸು"

01:53 PM Jan 21, 2025 IST | Samyukta Karnataka

ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಅನಾವರಣಗೊಳಿಸಿದರು.

ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ‌ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು‌ ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ. ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ‌ ಜರುಗಿದ‌ ಅಧಿವೇಶನದಲ್ಲಿ ಅಸ್ಪೃಶ್ಯತೆ‌ ನಿವಾರಣೆಗೆ ಕರೆ‌ ನೀಡಿದರು. ಆದ್ದರಿಂದ ಈ‌ ನೆಲ‌ವು ಐತಿಹಾಸಿಕ‌ ಮಹತ್ವವನ್ನು ಹೊಂದಿದೆ. 1924 ರಲ್ಲಿ ಕಾಂಗ್ರೆಸ್ ಅಧಿವೇಶನ‌ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ‌‌ ನಡೆಸಿರುವುದು ಅತ್ಯಂತ‌ ಮಹತ್ವದ್ದಾಗಿದೆ ಎಂದರು. ಗುಲ್ಬರ್ಗದಲ್ಲೂ ಕೂಡ‌ ಮಹಾತ್ಮಾ‌ಗಾಂಧೀಜಿಯವರ ವಿಶೇಷ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Tags :
#ಜೈ ಬಾಪು#ಬೆಳಗಾವಿ#ಮಲ್ಲಿಕಾರ್ಜುನಖರ್ಗೆ#ಸುವರ್ಣಸೌಧ
Next Article