For the best experience, open
https://m.samyuktakarnataka.in
on your mobile browser.

ಗುಂಡಾಗಿರಿ ಮಾಡಿದವರ ಬಂಧಿಸಿ

07:36 PM Jan 12, 2025 IST | Samyukta Karnataka
ಗುಂಡಾಗಿರಿ ಮಾಡಿದವರ ಬಂಧಿಸಿ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಗುಂಡಾಗಿರಿ ಮಾಡಿದವರು ಮತ್ತು ಈಗ ರವಿ ಅವರಿಗೆ ಬೆದರಿಕೆ ಪತ್ರ ಬರೆದವರನ್ನು ಮೊದಲು ಬಂಧಿಸುವ ಕೆಲಸವಾಗಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ನಡೆದ ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಅದರಲ್ಲೂ ಹಿಂದುತ್ವದ ಬಗ್ಗೆ ಹೋರಾಡುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ರವಿ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿತ್ತು. ಈಗ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ. ಅರಾಜಕತೆ ಸೃಷ್ಟಿಯಾಗಿದೆ ಎಂಬುದು ತಿಳಿಯುತ್ತದೆ ಎಂದು ದೂರಿದರು. ಕರ್ನಾಟಕದಲ್ಲಿ ಏಜೆಂಟರಂತೆ ಪೊಲೀಸರು ವರ್ತಿಸುವುದು ಸರಿಯಲ್ಲ ಎಂದರು.