For the best experience, open
https://m.samyuktakarnataka.in
on your mobile browser.

ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು

10:12 AM Oct 25, 2024 IST | Samyukta Karnataka
ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು

ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ. ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಯಾರೂ ಕೂಡ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ "ಗೃಹ ಆರೋಗ್ಯ- ಆರೋಗ್ಯ ಸೇವೆ ಮನೆ ಬಾಗಿಲಿಗೆ" ನೂತನ‌ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಅರಾಮವಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ. ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ.

ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ. ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ.

ಕ್ಯಾನ್ಸರ್ ಕೂಡ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ.

ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ ? ಬ್ಯಾಲೆನ್‌ಸ್ಡ್ ಆಹಾರ ಸೇವನೆ ಕೂಡ ಮುಖ್ಯ ಎಂದರು.

Tags :