ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುಡ್ಡ ಕುಸಿತದಲ್ಲಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ಘೋಷಣೆ

01:08 PM Jul 17, 2024 IST | Samyukta Karnataka

ಬೆಂಗಳೂರು: ಉತ್ತರ ಕನ್ನಡ ಗುಡ್ಡ ಕುಸಿತದಲ್ಲಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದಿದ್ದಾರೆ.

Next Article