ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಮುಲಾಜಿಲ್ಲದೆ ಕ್ರಮ

01:48 PM Sep 03, 2024 IST | Samyukta Karnataka

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ

ಮೈಸೂರು: ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಮಾತನಾಡಿರುವ ಅವರು ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉತ್ಕೃಷ್ಟ ದರ್ಜೆಯ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಹಿಂದೆಯೂ ಸಮಿತಿ ಇತ್ತು. ಆದರೆ ಈಗ ಪ್ರಾಧಿಕಾರದ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು.
ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಸುತ್ತಲಿನ ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ. ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿಯ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.

Tags :
#ಅಭಿವೃದ್ಧಿಪ್ರಾಧಿಕಾರ#ಚಾಮುಂಡಿಬೆಟ್ಟ#ಚಾಮುಂಡೇಶ್ವರಿಕ್ಷೇತ್ರ#ಮೈಸೂರು
Next Article