ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೃಹಲಕ್ಷ್ಮೀ ಯೋಜನೆ ಕಟ್ಟುನಿಟ್ಟಾಗಿ ತಲುಪಲು ವಿಶೇಷ ಶಿಬಿರ

05:01 PM Dec 27, 2023 IST | Samyukta Karnataka

ಕಲಬುರಗಿ: ಗೃಹಲಕ್ಷ್ಮೀ ಯೋಜನೆಯ ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ. ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ
ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

Next Article