For the best experience, open
https://m.samyuktakarnataka.in
on your mobile browser.

ಗೈರಿಗೆ ಕಾರಣ ಕೊಟ್ಟು ಸೋನಿಯಾ ಪತ್ರ..!

08:48 PM Dec 26, 2024 IST | Samyukta Karnataka
ಗೈರಿಗೆ ಕಾರಣ ಕೊಟ್ಟು ಸೋನಿಯಾ ಪತ್ರ

ಬೆಳಗಾವಿ: ೧೯೨೪ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮ ಆಚರಿಸಲಾಗುತ್ತಿದೆ. ಎರಡು ದಿನಗಳ ಕಾಂಗ್ರೆಸ್
ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಗೈರಾಗಿದ್ದಾರೆ.
ಆದರೆ ಈ ಸಂಬಂಧ ಪತ್ರ ಬರೆದಿರುವ ಅವರು ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.
ಸೋನಿಯಾ ಗಾಂಧಿ ಪತ್ರದಲ್ಲೇನಿದೆ…?
ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗಿರಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ೩೯ನೇ ಅಧಿವೇಶನ ನಡೆದ ಸ್ಥಳದಲ್ಲೇ ನೀವೆಲ್ಲಾ ಸಮಾವೇಶಗೊಂಡಿರುವುದು ಸೂಕ್ತವಾಗಿದೆ.
ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿ ನಡೆದಿದ್ದ ಸಮಾವೇಶ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ‍್ಯ ಚಳವಳಿಗೆ ಮಹತ್ವದ ತಿರುವು ನೀಡಿದೆ. ದೆಹಲಿಯಲ್ಲಿ ಅಧಿಕಾರದಲ್ಲಿರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಲಿಲ್ಲ. ಅಲ್ಲದೇ ಮಹಾತ್ಮ ಗಾಂಧೀಜಿ ಅವರನ್ನು ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನು ಸಂಭ್ರಮಿಸಿದವರು. ದೇಶದ ವಿವಿಧೆಡೆ ಗಾಂಧಿ ಸಂಘ-ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದು ಇಂದು ನಡೆಯುತ್ತಿರುವ ಸಭೆಯನ್ನು ನವ ಸತ್ಯಾಗ್ರಹ ಬೈಠಕ್ ಎಂದು ಕರೆದಿರುವುದು ಸೂಕ್ತವಾಗಿದೆ ಎಂದು ವಿವರಿಸಿದ್ದಾರೆ.
ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.