For the best experience, open
https://m.samyuktakarnataka.in
on your mobile browser.

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಉದ್ಘಾಟನೆ

02:47 PM Sep 02, 2024 IST | Samyukta Karnataka
ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಉದ್ಘಾಟನೆ
ಸಾಂದರ್ಭಿಕ ಚಿತ್ರ

ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು

ಬೆಂಗಳೂರು: ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಲಾಗಿದೆ. ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ

Tags :