For the best experience, open
https://m.samyuktakarnataka.in
on your mobile browser.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ

03:37 PM Jan 10, 2024 IST | Samyukta Karnataka
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು.
ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು. ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದಿದ್ದಾರೆ.