ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ: ಅಂತಿಮ ಫಲಿತಾಂಶ ಪ್ರಕಟ

04:26 PM Dec 12, 2024 IST | Samyukta Karnataka

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 29.09.2024 ಮತ್ತು 26.10.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಪ್ರಕಟಿಸಲಾಗಿರುತ್ತದೆ ಹಾಗೂ ದಿನಾಂಕ 27.10.2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಪ್ರಕಟಿಸಿ ದಿನಾಂಕ 28.11.2024 ರ ವರೆಗೆ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು.
ಅದರಂತೆ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 2021 (ತಿದ್ದುಪಡಿ) ರಲ್ಲಿ ನಿರ್ದೇಶಿಸಿರುವಂತೆ, ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಗಳಿಸಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಮಾತ್ರ ದಿನಾಂಕ 12.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.

Tags :
#ಪರೀಕ್ಷೆ#ಪಲಿತಾಂಶ
Next Article