For the best experience, open
https://m.samyuktakarnataka.in
on your mobile browser.

ಗ್ರಾಮ ಪಂಚಾಯತ್ ಬಲವರ್ಧನೆಗೆ ಎನ್‌ಡಿಎ ಸರಕಾರ ಕಾರಣ

03:35 PM Oct 05, 2024 IST | Samyukta Karnataka
ಗ್ರಾಮ ಪಂಚಾಯತ್ ಬಲವರ್ಧನೆಗೆ ಎನ್‌ಡಿಎ ಸರಕಾರ ಕಾರಣ

ಮಂಗಳೂರು: ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಅವರನ್ನು ಬೆಂಬಲಿಸಿ ಬಿಜೆಪಿಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು
ತಾನು ಮತದಾರರಲ್ಲಿನ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದಲ್ಲಿನ ಸರಕಾರ ಹಗರಣಗಳಿಂದ ಕೂಡಿದ ಸರಕಾರವಾಗಿದೆ. ಅಭಿವೃದ್ಧಿ ಯೋಜನೆ ಹಣ ಬಿಡುಗಡೆ ಆಗುತ್ತಿಲ್ಲ. ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ. ಹಿಂದಿನ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಕ್ಕೆ ಜಿಲ್ಲೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ದಸರಾ ಕಾರ್ಯಕ್ರಮದಲ್ಲೂ ಮುಖ್ಯ ಮಂತ್ರಿ ರಾಜಕೀಯ ಮಾತುಗಳನ್ನಾಡಿದ್ದಾರೆ. ಭೃಷ್ಟಾಚಾರ ಮಿತಿ ಮೀರಿದೆ. ರೈತರ ಆತ್ಮಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಮುಖ್ಯ ಮಂತ್ರಿಯವರ ಮೇಲೆ ಎಫ್‌ಐಆರ್ ದಾಖಲಾದರು ಅವರು ರಾಜಿನಾಮೆ ಕೊಟ್ಟಿಲ್ಲ. ಅವರು ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು.
ನಾನು ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಾನು ವಿಧಾನ ಪರಿಷತ್ ಅಭ್ಯರ್ಥಿಯ ಆಕಾಂಕ್ಷಿಯಾಗಿರಲಿಲ್ಲ ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷನಾಗುವ ಅವಕಾಶ ನೀಡಿದೆ, ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ ಮುಂದೆಯೂ ಪಕ್ಷ ಘಟನೆಯ ಕೆಲಸ ಮಾಡುತ್ತೇನೆ ಎಂದು ನಳಿನ್ ಕುಮಾರ್ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ದ.ಕ ಜಿ ಬೆಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ,ಜಿಲ್ಲಾ ವಕ್ತಾರ ರಾಜಗೋಪಾಲ ರೈ,ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.