ಘಾಟ್ ಬಳಿ ಭೀಕರ ಅಪಘಾತ: 9 ಕ್ಕೂ ಹೆಚ್ಚು ಮಂದಿ ಸಾವು!
ಲಾರಿ ಕಂದಕಕ್ಕೆ ಉರುಳಿದ ಪರಿಣಾಮ ಲಾರಿಯಲ್ಲಿದ್ದ 9 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ
ಕಾರವಾರ: ಹಣ್ಣು ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕ್ಕಕ್ಕೆ ಉರುಳಿ 9 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರೆಬೈಲ್ ಘಟ್ಟದ ಕಾಗೇರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ.
ಹಾವೇರಿಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು. ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ. ಪರಿಣಾಮ ಲಾರಿಯಲ್ಲಿದ್ದ 9 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಗಾಯಗೊಂಡವರನ್ನು ಯಲ್ಲಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಯಲ್ಲಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ.
ಇನ್ನು ಘಟನಾ ಸ್ಥಳದಲ್ಲಿ ಪೋಲಿಸರು ಕಾರ್ಯಾಚರಣೆ ನಡೆಸಿದ್ದು ಅಪಘಾತಕ್ಕೊಳಗಾದವರ ರಕ್ಷಣೆಯಲ್ಲಿ ತೊಡಗಿದ್ದಾರೆ.