ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಂದನವನದ ಚಿಲುಮೆಗಳು ದ್ವಿಭಾಷಾ ಪುಸ್ತಕ ಬಿಡುಗಡೆ

01:15 PM Dec 17, 2024 IST | Samyukta Karnataka

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು.

ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ ಸಂದರ್ಭದಲ್ಲಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯು ಈ ಅಪರೂಪದ ಕಾಫಿ ಟೇಬಲ್ ಪುಸ್ತಕವನ್ನು ಹೊರತಂದಿದ್ದು, ಕನ್ನಡ ಚಿತ್ರರಂಗಕ್ಕೆ ತಿರುವು ನೀಡಿದಂತಹ 90 ಚಿತ್ರಗಳ ವಿಶೇಷ ದಾಖಲೆ ಮತ್ತು ಅಪರೂಪದ ಫೋಟೋಗಳನ್ನು ಈ ಪುಸ್ತಕ ಒಳಗೊಂಡಿದೆ. ಕನ್ನಡ ಸಿನಿಮಾ ರಂಗದ ಕುರಿತು ದ್ವಿಭಾಷೆಯಲ್ಲಿ ಬಂದ ಕನ್ನಡದ ಮೊದಲ ಕಾಫಿ ಟೇಬಲ್ ಪುಸ್ತಕ ಇದಾಗಿದೆ.

ಪತ್ರಕರ್ತರು ಹಾಗೂ ಲೇಖಕರೂ ಆಗಿರುವ ಡಾ. ಶರಣು ಹುಲ್ಲೂರು ಮತ್ತು ಎಸ್. ಶ್ಯಾಮ್ ಪ್ರಸಾದ್ ಜೊತೆಯಾಗಿ ಆರೇಳು ತಿಂಗಳ ಕಾಲ ಈ ಪುಸ್ತಕ ಹೊರತರಲು ಶ್ರಮಿಸಿದ್ದನ್ನು ಹಂಸಲೇಖ ಮುಕ್ತ ಕಂಠದಿಂದ ಹೊಗಳಿದರು. ಇಂತಹ ದಾಖಲೆಗಳು ಹೆಚ್ಚಾಗಲಿ ಅಂತ ಹಾರೈಸಿದರು.

ಪುಸ್ತಕ ರೂಪದಲ್ಲಿ ಸಿನಿಮಾ ಕುರಿತಾದ ವಿಷಯಗಳು ಕನ್ನಡದಲ್ಲಿ ವಿರಳ, ದಾಖಲೀಕರವೂ ಇಲ್ಲ. ಅದು ಕನ್ನಡದಲ್ಲಿ ಆಗಲಿ ಅಂತ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿದರು.

ಸಿನಿಮಾ ಪಠ್ಯಗಳ ಜರೂರತ್ತು ಇಂದಿನ ದಿನವಿದೆ. ಅದು ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಮೂಲಕ ಆಗಿರುವುದು ಅಭಿನಂದನೆ ಸಲ್ಲಿಸಲೇಬೇಕಾದ ಕೆಲಸ. ಪುಸ್ತಕ ಎಲ್ಲರ ಮನೆಯಲ್ಲೂ ಇರಲಿ ಅಂದರು ಟಿ.ಎಸ್. ನಾಗಾಭರಣ.

Tags :
@goldenganii#LandmarksOfSandalwood#ಚಂದನವನದ_ಚಿಲುಮೆಗಳು
Next Article