For the best experience, open
https://m.samyuktakarnataka.in
on your mobile browser.

ಚನ್ನಪಟ್ಟಣ: ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ

03:59 PM Oct 24, 2024 IST | Samyukta Karnataka
ಚನ್ನಪಟ್ಟಣ  ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್​ ಮುಖಂಡರ ಸಭೆ ಬಳಿಕ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದರು. ನಾಳೆ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಾರೆ. ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

Tags :