ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ
08:49 PM Sep 11, 2024 IST
|
Samyukta Karnataka
ಮಂಗಳೂರು: ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟಿಯ ಡಬಲ್ ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್ ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಅಂಬ್ಯುಲೆನ್ಸ್ ನಿಲ್ಲಿಸಿ ಸೈರನ್ ಹಾಕಿ ವಾಹನ ಸವಾರರಿಗೆ ಎಚ್ಚರಿಕೆಯಿಂದ ಚಲಿಸುವಂತೆ ಸೂಚನೆ ನೀಡಿದ್ದಾರೆ.
Next Article