For the best experience, open
https://m.samyuktakarnataka.in
on your mobile browser.

ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ

03:04 PM Jan 20, 2025 IST | Samyukta Karnataka
ಚಾಲಕನ ನಿಯಂತ್ರಣ ತಪ್ಪಿ ksrtc ಬಸ್ ಪಲ್ಟಿ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿಂದು KSRTC ಬಸ್ ಪಲ್ಟಿಯಾಗಿದೆ..
ಬಸ್‌ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಂಡ್ಯಕ್ಕೆ ತೆರಳುತ್ತಿದ್ದ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿಯವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿದರು.. ಅಪಘಾತದ ಬಗ್ಗೆ ಮಾಹಿತಿ ಪಡೆದ ಸಚಿವರು, ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಿದರು. ಮಂಡ್ಯದ ಮದ್ದೂರು ತಾಲೂಕಿನ ನಿಢಘಟ್ಟ ಬಳಿಯ ಹಳೇ ಮೈ - ಬೆಂ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್‌ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ‌. ಗಾಯಗೊಂಡ ಪ್ರಯಾಣಿಕರಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಗಂಭೀರ ಗಾಯಗಳಾಗಿರುವ ಇಬ್ಬರು ಬಸ್ ಪ್ರಯಾಣಿಕರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Tags :