For the best experience, open
https://m.samyuktakarnataka.in
on your mobile browser.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್‌!

10:52 AM Jun 11, 2024 IST | Samyukta Karnataka
ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್‌

ಮೈಸೂರು: ನಟ ದರ್ಶನ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾ ಸ್ವಾಮಿ ಎಂಬವರು ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ ಆಗಿದ್ದರು. ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಸೂಚನೆ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸದ್ಯ ಈಗ ದರ್ಶನ್‌ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಅರೆಸ್ಟ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.