For the best experience, open
https://m.samyuktakarnataka.in
on your mobile browser.

ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್

12:48 PM Jan 23, 2024 IST | Samyukta Karnataka
ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್

ಚಿಕ್ಕಮಗಳೂರು: ಹಿರೇಮಗಳೂರಿನ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ.
ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶಿಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದಾರೆ. ಹಿರೇಮಗಳೂರು ಕಣ್ಣನ್ ಅವರು ಈ ದೇಗುಲದಲ್ಲಿ ದಿನ ನಿತ್ಯವೂ ಸೀತಾ ರಾಮ ಲಕ್ಷ್ಮಣರಿಗೆ ಕನ್ನಡದಲ್ಲೇ ಮಂತ್ರಘೋಷಗಳಿಂದ ಪೂಜೆ ಸಲ್ಲಿಸುವುದು ವಿಶೇಷವಾಗಿದ್ದು, ರಾಜ್ಯ ಹೊರ ರಾಜ್ಯದಿಂದ ಆಗಮಿಸುವ ನೂರಾರು ಭಕ್ತರು ಕಲ್ಯಾಣ ರಾಮರ ದರ್ಶನ ಪಡೆಯುತ್ತಿದ್ದಾರೆ.