For the best experience, open
https://m.samyuktakarnataka.in
on your mobile browser.

ಚಿತ್ರದುರ್ಗ ಕಲುಷಿತ ನೀರು ಪ್ರಕರಣ : ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ

03:55 PM Oct 06, 2023 IST | Samyukta Karnataka
ಚಿತ್ರದುರ್ಗ ಕಲುಷಿತ ನೀರು ಪ್ರಕರಣ   ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ

ಚಿತ್ರದುರ್ಗ: ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವುಗಳ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ, ಮನೆಯನ್ನೂ ಕಟ್ಟಿಸಿಕೊಡುತ್ತೇವೆ. ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು.
ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.