ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚುನಾವಣಾಧಿಕಾರಿಯ ಕಾರು ಅಡ್ಡಗಟ್ಟಿ ಧಿಕ್ಕಾರದ ಕೂಗು

01:45 PM Nov 13, 2024 IST | Samyukta Karnataka

ಚುನಾವಣಾಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಲು ಯತ್ನಿಸಿದರು. ಕೂಡಲೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಬಾಗಲಕೋಟೆ: ಚುನಾವಣಾಧಿಕಾರಿಗಳ ವಿರುದ್ಧವೇ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ವಾರ್ಡ್ ನಂ 19ರ ಉಪ ಚುನಾವಣೆ ನವೆಂಬರ್ 23 ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ನಾಗೇಶ್ ಮೇದಾರ ಮತ್ತು ಕಾಂಗ್ರೆಸ್​ನಿಂದ ರತ್ನಾ ತಳವಾರ ನಾಪಪತ್ರ ಸಲ್ಲಿಸಿದ್ದಾರೆ. ರತ್ನಾ ತಳವಾರ ಅವರ ನಾಮಪತ್ರ ಪರಿಶೀಲನೆ ನಂತರ ನಗರಸಭೆ ಎದುರು ಹೈಡ್ರಾಮಾ ಸೃಷ್ಟಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರತ್ನಾ ತಳವಾರ ಅವರು ನಾಮಪತ್ರ ಸರಿಯಾಗಿ ಭರ್ತಿ ಮಾಡಿಲ್ಲ. ಆದರೂ ಅವರ ನಾಮಪತ್ರ ಅಂಗೀಕಾರ‌ ಮಾಡಿದ್ದಾರೆ ಎಂದು ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಚುನಾವಣಾಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಲು ಯತ್ನಿಸಿದರು. ಕೂಡಲೆ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Tags :
#ಉಪಚುನಾವಣೆ#ಬಾಗಲಕೋಟೆ
Next Article