ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚೈತ್ರಾ ಮತ್ತು ಶ್ರೀಕಾಂತ್​ ಇಂದು ಬಿಡುಗಡೆ

02:13 PM Dec 05, 2023 IST | Samyukta Karnataka

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾಗೆ ಕೋರ್ಟ್ ಜಾಮೀನು ನೀಡಿದ್ದು ಆಕೆ ಇಂದು ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿ ಚೈತ್ರಾ ಹಾಗೂ ಏಳನೇ ಆರೋಪಿಯಾಗಿರುವ ಶ್ರೀಕಾಂತ್‍ಗೆ 3ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಂದು ಪರಪ್ಪನ ಅಗ್ರಹಾರದ ಕಾರಾಗೃಹದಿಂದ ಈ ಇಬ್ಬರು ಬಿಡುಗಡೆಯಾಗಲಿದ್ದಾರೆ. ಈ ಪೈಕಿ ಪ್ರಕರಣ ಸಂಬಂಧ ಮೂವರಿಗೆ ಜಾಮೀನು ಸಿಕ್ಕಿದ್ದಂತಾಗುತ್ತದೆ. ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳಾದ ಚೈತ್ರಾ, ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್, ಚನ್ನನಾಯ್ಕ್, ಪ್ರಜ್ವಲ್, ಶ್ರೀಕಾಂತ್ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಇತ್ತೀಚೆಗೆ ಈ ಒಂಭತ್ತು ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಸಿಸಿಬಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

Next Article