ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಾಮಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶ

11:53 AM Dec 18, 2023 IST | Samyukta Karnataka

ಬೆಂಗಳೂರು: ಸಿದ್ದರಾಮಯ್ಯನವರಿಗೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಾಮಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ ಮಾತ್ರವಲ್ಲ ಅದು ಕರ್ತವ್ಯ ಕೂಡ ಹೌದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕಿಂತ ಪ್ರಧಾನ ಮಂತ್ರಿಗಳ ಮೇಲೆ, ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ, ರಾಜಕೀಯ ಪ್ರೇರಿತ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ. ಮೊನ್ನೆ ಸದನದಲ್ಲಿ ಪ್ರಧಾನಿ ಮೋದಿ ಅವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿದ ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಾಮಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ತಮ್ಮದೇ ಆದ ಸಂವಿಧಾನ ಬದ್ಧ ಜವಾಬ್ದಾರಿಗಳಿವೆ. 12 ವರ್ಷಗಳ ಕಾಲ ಒಂದು ರಾಜ್ಯದ ಮುಖ್ಯಮಂತ್ರಿಗಳಾಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರಗಳ ಇತಿಮಿತಿಗಳು, ಅಗತ್ಯತೆಗಳು, ಅಪೇಕ್ಷೆಗಳ ಬಗ್ಗೆ ಇರುವಷ್ಟು ಅರಿವು, ಅವಗಾಹನೆ, ಸಂವೇದನೆ ಬಹುಶಃ ಹಿಂದಿನ ಬೇರೆ ಯಾವ ಪ್ರಧಾನಮಂತ್ರಿಗೂ ಇರಲಿಲ್ಲ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿರುವಾಗ ತಮ್ಮ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ, ಕನ್ನಡ ನಾಡಿನ ಆರೂವರೆ ಕೋಟಿ ಜನತೆಯ ಹಿತರಕ್ಷಣೆಯ ದೃಷ್ಟಿಯಿಂದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾನ್ಯ ಸಿದ್ದರಾಮಯ್ಯನವರು ತಮ್ಮ ಮುತ್ಸದ್ಧಿತನ ಪ್ರದರ್ಶಿಸುತ್ತಾರೆ ಎಂದು ಭಾವಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

Next Article