ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಮೀರ್ ಹೇಳಿಕೆ ನಾಗರಿಕ ಸಮಾಜ ಒಪ್ಪುವಂಥದ್ದಲ್ಲ

01:52 PM Nov 18, 2024 IST | Samyukta Karnataka

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ನಾಗರಿಕ ಸಮಾಜ ಒಪ್ಪುವಂಥದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಂದು ಗೌರವ ಇದ್ದೇ ಇರುತ್ತದೆ. ಶ್ರೀಮಂತ ಇರಲಿ, ಬಡವ ಇರಲಿ, ಎಲ್ಲರಿಗೂ ಅವರದ್ದೇ ಆದ ಗೌರವ ಇರುತ್ತದೆ. ಹಾಗಾಗಿ ಯಾರೂ ಯಾರನ್ನೂ ಕೊಂಡುಕಳ್ಳಲು ಆಗುವುದಿಲ್ಲ. ಇದರ ಅರಿವು ಇರುವವರು ಯಾರೂ ಹೀಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿದ್ದ 40% ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಲಿ ಉಲ್ಲೇಖ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ. ಈಗಾಗಲೇ ನಮ್ಮ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಮಾತನಾಡಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದ ನಂತರ ನಾನು ಮಾತನಾಡುತ್ತೇನೆ, ಅಲ್ಲಿವರೆಗೂ ನಾನು ಮಾತನಾಡುವುದಿಲ್ಲ. 40% ಆರೋಪದ ಬಗ್ಗೆ ಯಾವುದು ಸತ್ಯ ಯಾವುದು ಅಸತ್ಯ ಎನ್ನುವ ಬಗ್ಗೆ ನವೆಂಬರ್ 23ರ ನಂತರ ನಾನು ಮಾತನಾಡುತ್ತೇನೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ತನಿಖೆಗೆ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಎಲ್ಲ ಪ್ರಶ್ನೆಗಳಿಗೂ ಉಪ ಚುನಾವಣಾ ಫಲಿತಾಂಶ ಬಂದ ನಂತರವೇ ಮಾತನಾಡುತ್ತೇನೆ ಎಂದರು.

Tags :
40%bangalorebasavaraj bommaibjpzameer ahmed
Next Article