ಜಯದೇವ ಆಸ್ಪತ್ರೆ ಸೆಪ್ಟೆಂಬರ್‌ಗೆ ಲೋಕಾರ್ಪಣೆ
04:37 PM Aug 28, 2024 IST | Samyukta Karnataka
ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಸೆಪ್ಟೆಂಬರ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಡಳಿಯ ಅಧ್ಯಕ್ಷ ಡಾ. ಅಜಯ ಸಿಂಗ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು ಕಲಬುರಗಿಯಲ್ಲಿ ಪರಿಷ್ಕೃತ ₹ 220.65 ಕೋಟಿ ವೆಚ್ಚದಲ್ಲಿ ಸಂಪೂರ್ಣವಾಗಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಯ ಬಹುತೇಕ ಕಾಮಗಾರಿ ಮುಗಿದಿದ್ದು, ಸೆಪ್ಟೆಂಬರ್ ಮಾಹೆಯಲ್ಲಿ ಇದರ ಲೋಕಾರ್ಪಣೆ ಮಾಡಲಾಗುವುದು ಎಂದಿದ್ದಾರೆ.