For the best experience, open
https://m.samyuktakarnataka.in
on your mobile browser.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯ

03:05 PM Feb 09, 2024 IST | Samyukta Karnataka
ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ ₹4,561 ಕೋಟಿ ಸಾಲ, ಒಡಂಬಡಿಕೆಗೆ ಅಂಕಿತ, ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆ(BSRP) ಗೆ ಜಮರ್ನಿಯ KFW ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಶುಕ್ರವಾರ ಅಧಿಕೃತವಾಗಿ ಒಡಂಬಡಿಕೆಗೆ ಸಹಿ ಹಾಕಲಾಯಿತು.
ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಾದ ಶ್ರೀಮತಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕರಾದ ಶ್ರೀ ವೂಲ್ಫ್ ಮೌತ್ ಅಂಕಿತ ಹಾಕಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್, KFW ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜೊತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಗುರಿಯಾಗಿದ್ದು, 2027ರ ಡಿಸೆಂಬರ್ ವೇಳೆಗೆ BSRP ರೈಲು ಯೋಜನೆ ಪೂರ್ಣಗೊಳ್ಳಲಿದ್ದು, ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ! ಎಂದಿದ್ದಾರೆ.