ಜಾಗೃತಿಗಾಗಿ ಡ್ರಾಮಾ ಮಾಡಿದ ಪೂನಂ
ಮುಂಬೈ: ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಎಂದಿದ್ದಾರೆ.