ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಹುನ್ನಾರ

09:25 PM Dec 24, 2023 IST | Samyukta Karnataka

ದಾವಣಗೆರೆ: ಪ್ರಸ್ತುತ ದೇಶದಲ್ಲಿ ಜಾತಿ ಗಣತಿ ಎಂಬುದು ರಾಜಕೀಯ ಅಸ್ತ್ರವಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಭಾನುವಾರ ಆಯೋಜಿಸಿದ್ದ ನೌಕರರ ಮತ್ತು ಸಾಹಿತ್ಯ ಅಧಿವೇಶನದಲ್ಲಿ ಅವರು ಮಾತನಾಡಿದರು.
ಎಲ್ಲಾ ಸಮುದಾಯಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಜಾತಿ ಗಣತಿ ಬೇಕು. ಆದರೆ ಈಗ ಆಗುತ್ತಿರುವುದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಗಣತಿಯ ಸದ್ದು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡಬಾರದು. ರಾಜಕಾರಣ ಮಾಡಲು ಹಲವಾರು ಮಾರ್ಗಗಳು ಇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಬೇರ್ಪಡಿಸುವ ಹುನ್ನಾರ ನಡೆಯುತ್ತದೆ. ಜಾತಿ ಗಣತಿ ಬಗ್ಗೆ ಸ್ಪಷ್ಟ ನೀತಿ ಇರಬೇಕು. ಈಗ ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿದೆ, ಅದು ಜಾತಿ ಗಣತಿಯಲ್ಲ. ಯಾವ್ಯಾವ ಸನುದಾಯದಲ್ಲಿ ಶಿಕ್ಷಣ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವರದಿ ತಯಾರಿ ಮಾಡಲಾಗಿದೆ. ಆದರೆ ಅದನ್ನೇ ಜಾತಿ ಗಣತಿ ಎಂದು ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ‌. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಸುಪ್ರೀಂ ಕೋಟ್೯ ಹಲವಾರು ಬಾರಿ ಪ್ರಸ್ತಾಪ ಮಾಡಿದೆ ಎಂದರು.

Next Article