ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತ

04:23 PM Sep 04, 2024 IST | Samyukta Karnataka

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಆರೋಪವಿದೆ. ಆದರೆ ಇದರಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ. ಮತ್ತು ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಒಂದು ವೇಳೆ ಬೆಳಗಾವಿಯಿಂದ ಯಾರೇ ಸಿಎಂ ಆದರೂ ಸ್ವಾಗತ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೇಳಿ ಬರುತ್ತಿದೆ. ನಮ್ಮ ಜಿಲ್ಲೆಯಿಂದ ಯಾರೇ ಸಿಎಂ ಆದರೂ ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅನುದಾನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಕಳೆದ ಎರಡು ವರ್ಷದಲ್ಲಿ ಕೋಟ್ಯಾಂತರ ರೂ. ಅನುದಾನ ನನಗೆ ದೊರೆತಿದೆ. ಸರಕಾರದಿಂದ ನನಗೆ ಯಾವುದೇ ರೀತಿಯ ಅನುದಾನ ಕೊರತೆ ಆಗಿಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯದ ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಅನೇಕ ಜವಾಬ್ದಾರಿ ನಿಭಾಯಿಸಿದ ನನಗೆ ಯಾವುದೇ ಹುದ್ದೆಯ ಆಸೆ ಇಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲಿ ನನಗೆ ಒಳ್ಳೆಯದಾಗುತ್ತದೆ. ಆ ವಿಶ್ವಾಸ ನನಗಿದೆ ಎಂದು ಇದೇ ವೇಳೆ ಲಕ್ಷ್ಮಣ ಸವದಿ ಹೇಳಿದರು.

Next Article