ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಿಲ್ಲೆಯ ಕೆರೆಗಳ ಪುನರುಜ್ಜೀವನಕ್ಕೆ ಕ್ರಮ: ಸಚಿವ ಖರ್ಗೆ

11:34 AM Mar 07, 2024 IST | Samyukta Karnataka

ಕಲಬುರಗಿ: ನಗರದ ಅಪ್ಪನ ಕೆರೆ ಸೇರಿದಂತೆ ಜಿಲ್ಲೆಯ ಕೆರೆಗಳ ಪುನರುಜ್ಜೀವನ ಮಾಡುವ ಕೆಲಸವನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನವೀಕರಣಗೊಂಡ ಅಪ್ಪನ‌ಕೆರೆ ಉದ್ಯಾನವನ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದರು.

ಕೋವಿಡ್ ಸಂಧರ್ಭದಲ್ಲಿ ಬಂದ್ ಮಾಡಲಾಗಿದ್ದ ಅಪ್ಪನ ಕೆರೆಯನ್ನು ಪ್ರಾದೇಶಿಕ ಆಯುಕ್ತರ ವಿಶೇಷ ಆಸಕ್ತಿಯಿಂದಾಗಿ ಈಗ ಉದ್ಯಾನವನ್ನು ನವೀಕರಣಗೊಳಿಸಲಾಗಿದೆ. ಇದು ಸಾರ್ವಜನಿಕರ ಆಸ್ತಿ ಇದನ್ನು ಜವಾಬ್ದಾರಿಯುತವಾಗಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕು ಎಂದು ಸಾರ್ವಜನಿಕರಲ್ಲಿ‌ ಮನವಿ ಮಾಡಿದರು.

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಇನ್ಮೂ ಹೆಚ್ಚು ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ತಾವು ಅಗತ್ಯ ಸಹಕಾರ ನೀಡಲು ಸಿದ್ದವಿರುವುದಾಗಿ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರು ಎಮ್ಮೆ ಹಾಲಿನ ನೂತನ ಪಾಕೇಟ್ ಬಿಡುಗಡೆ ಮಾಡಿದರು ಜೊತೆಗೆ ಅಪ್ಪನ ಕರೆಯ ಕುರಿತಾದ ವಿಡಿಯೋವನ್ನು ಬಿಡುಗಡೆಗೊಳಿಸಿದರು.

ವೇದಿಕೆಯ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅರೋಗ್ಯ ಸಚಿವ ದಿನೇಶ್ ಗುಂಡುರಾವ್, ಶಾಸಕರಾದ ಅಜಯ ಸಿಂಗ್, ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಜಿಡಿಎ ಅಧ್ಯಕ್ಷ ಮಜರ್ ಖಾನ್, ಕಲಬುರಗಿ, ಬೀದರ್ ಯಾದಗಿರಿ ಹಾಲು ಒಕ್ಕೂಟ ಅಧ್ಯಕ್ಷ ಆರ್.ಕೆ.ಪಾಟೀಲ್ ಸೇರಿದಂತೆ ಹಲವರಿದ್ದರು.

Next Article